RESPONSIVE LEADERBOARD AD AREA
Film News

ನಿಮ್ಮೂರಿನ ಚಿತ್ರಮಂದಿರಕ್ಕೆ ಬರಲಿದೆ ‘ನಟಸಾರ್ವಭೌಮ’ ಚಿತ್ರ ತಂಡ…!!

ಪವರ್ ಸ್ಟಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ 25 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮುನ್ನುಗ್ಗುತ್ತಿದೆ. ಫೆಬ್ರವರಿ 7ರಂದು 200 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಅತ್ಯುತ್ತಮ ಗಳಿಕೆ ಕಾಣುತ್ತಿದೆ, .

ಈ ಯಶಸ್ಸನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳಲು ಉದ್ದೇಶಿಸಿರುವ ಚಿತ್ರತಂಡ ಕರ್ನಾಟಕದಾದ್ಯಂತ ಚಿತ್ರ ಮಂದಿರಗಳಿಗೆ ಭೇಟಿ ನೀಡಲಿದೆ. ಭಾನುವಾರದಂದು ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಚಿತ್ರದುರ್ಗ, ಹಿರಿಯೂರು, ಶಿರಾ, ತುಮಕೂರಿನ ಚಿತ್ರಮಂದಿರಗಳಿಗೆ ಭೇಟಿ ನೀಡಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇದೀಗ ‘ಯುವರತ್ನ’ ಚಿತ್ರದ ಚಿತ್ರೀಕರಣದಲ್ಲಿ ಧಾರವಾಡದಲ್ಲಿ ಭಾಗವಹಿಸಿದ್ದಾರೆ. ಆ ಭಾಗದ ಚಿತ್ರ ಮಂದಿರಗಳಿಗೆ ಅವರು ಭೇಟಿ ನೀಡಲಿದ್ದಾರೆ.

ಚಿತ್ರದಲ್ಲಿ ಪುನೀತ್ ಪತ್ರಿಕಾ ಛಾಯಾಗ್ರಾಹಕನ ಪಾತ್ರದಲ್ಲಿ ನಟಿಸಿದ್ದು ಅವರ ಅಭಿನಯ ಮತ್ತು ಡ್ಯಾನ್ಸ್ ಗೆ ಚಿತ್ರರಸಿಕರು ಮನಸೋತಿದ್ದಾರೆ. ನಾಯಕಿಯಾಗಿ ಅನುಪಮಾ ಪರಮೇಶ್ವರನ್, ರಚಿತರಾಮ್ ನಟಿಸಿದ್ದಾರೆ. ರವಿಶಂಕರ್, ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ನಾಲ್ಕನೇ ವಾರದಲ್ಲಿ ಮುನ್ನುಗ್ಗುತ್ತಿದೆ.

ಚಿತ್ರವನ್ನು ಆಸ್ಟ್ರೇಲಿಯಾ ಮತ್ತು ಜರ್ಮನಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸುತ್ತಿದೆ ಈ ನಡುವೆ, ಮಧ್ಯ ಏಷ್ಯಾದಲ್ಲಿ ಬಿಡುಗಡೆಯಾಗಿರುವ ಈ ಚಿತ್ರ, ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top