RESPONSIVE LEADERBOARD AD AREA
Film News

ಮುಂದಿನ ವಾರ ‘ಒಡೆಯ’ ಹೈದರಾಬಾದ್ ಗೆ..!!

ರಾಜ್ಯದಾದ್ಯಂತ ‘ಯಜಮಾನ’ನ ಓಟ ಈಗ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಖತ್ ಖುಷಿಯಲ್ಲಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ, ಬಿ ಸುರೇಶ ಮತ್ತು ಶೈಲಜಾ ನಾಗ್ ಅವರು ನಿರ್ಮಿಸಿರುವ ‘ಯಜಮಾನ’ ದಾಖಲೆಯ ಕಲೆಕ್ಷನ್ ಮಾಡುತ್ತಿದೆ.

ಈ ನಡುವೆ ದರ್ಶನ್ ಅವರು ‘ಯಜಮಾನ’ನ ಬಳಿಕ ಒಂಚೂರು ವಿಶ್ರಮಿಸದೆ, ‘ಒಡೆಯ’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಎಂ ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿದೆ. ಎರಡನೇ ಹಂತದ ಚಿತ್ರೀಕರಣ ಮುಂದಿನವಾರ ಪ್ರಾರಂಭವಾಗಲಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.

ದರ್ಶನ್ ಅವರು ಈ ಚಿತ್ರದಲ್ಲಿ ಎರಡು ವಿಭಿನ್ನ ಶೇಡ್ ಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಯಶಸ್, ಪಂಕಜ್, ನಿರಂಜನ್ ಮತ್ತು ಸಮರ್ಥ ರವರು ದರ್ಶನ್ ಅವರ ಸಹೋದರರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರವನ್ನು ಸಂದೇಶ್ ನಾಗರಾಜ್ ಅವರು ತಮ್ಮ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿದ್ದು, ಚಿತ್ರದ ನಾಯಕಿಯಾಗಿ ಮಾಡಲಿಂಗ್ ಬೆಡಗಿ ರಾಘವಿ ತಿಮ್ಮಯ್ಯ ಇದೇ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top