RESPONSIVE LEADERBOARD AD AREA
Film News

ರಮೇಶ್ ಅರವಿಂದ್ ಮತ್ತು ರಾಧಿಕಾ ಚೇತನ್ ಜೋಡಿಯ ಹೊಸ ಚಿತ್ರ…!!

ಆಕಾಶ್ ಶ್ರೀವತ್ಸ ನಿರ್ದೇಶನದ ರಮೇಶ್ ಅರವಿಂದ್ ನಟಿಸುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಕಥಾವಸ್ತುವುಳ್ಳ ಹೊಸ ಚಿತ್ರವೊಂದಕ್ಕೆ ‘ರಂಗಿತರಂಗ’ ನಾಯಕಿ ರಾಧಿಕಾ ಚೇತನ್ ಆಯ್ಕೆಯಾಗಿದ್ದಾರೆ.

ನಿರ್ದೇಶಕ ಆಕಾಶ್ ಶ್ರೀವತ್ಸ ಈ ಚಿತ್ರಕ್ಕಾಗಿ ಸೂಕ್ತವಾದ ಟೈಟಲನ್ನು ಹುಡುಕುತ್ತಿದ್ದು, ರಮೇಶ್ ಅವರು ಎಸಿಪಿ ದರ್ಜೆಯ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಒಂದು ಅತ್ಯುತ್ತಮವಾದ ಮಹಿಳಾ ಪಾತ್ರವಿದ್ದು, ರಾಧಿಕಾ ಚೇತನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಇನ್ನೊಂದು ನಾಯಕಿಯ ಪಾತ್ರಕ್ಕೆ ಹುಡುಕಾಟ ನಡೆದಿದೆ. ಈಗ ಚಿತ್ರದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಇದೇ ನವೆಂಬರ್ ಮಧ್ಯಭಾಗದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಚಿತ್ರದಲ್ಲಿ ರಾಧಿಕಾ ಚೇತನ್ ರಮೇಶ್ ಅವರ ಪತ್ನಿಯ ಪಾತ್ರದಲ್ಲಿ ನಟಿಸಲಿದ್ದು, ವಕೀಲೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಆಕಾಶ್ ಮತ್ತು ಅಭಿಜಿತ್ ವೈ ಆರ್ ಕಥೆ ಮತ್ತು ಚಿತ್ರಕಥೆ ರಚಿಸಿದ್ದು ಜುದಾ ಸ್ಯಾಂಡಿ ಸಂಗೀತ ನೀಡಿದ್ದಾರೆ.

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top