RESPONSIVE LEADERBOARD AD AREA
Film News

ಕಂಠೀರವ ಸ್ಟುಡಿಯೋದಲ್ಲಿ ಹೆಜ್ಜೆ ಹಾಕಿದ ‘ರುಸ್ತುಂ’ ಜೋಡಿ..!!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ‘ರುಸ್ತುಂ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ನ ಚಿತ್ರೀಕರಣ ಒಂದು ಕಂಠೀರವ ಸ್ಟುಡಿಯೋದಲ್ಲಿ ಭರ್ಜರಿಯಾಗಿ ಸಾಗುತ್ತಿದೆ.
ಸಾಹಸ ನಿರ್ದೇಶಕ ರವಿವರ್ಮ ಇದೇ ಮೊದಲ ಬಾರಿಗೆ ಶಿವಣ್ಣನವರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಾಡಿನ ದೃಶ್ಯದ ಚಿತ್ರೀಕರಣಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಬೃಹತ್ ಗಾತ್ರದ ಸೆಟ್ ನಿರ್ಮಿಸಲಾಗಿದ್ದು, ಸೆಂಚುರಿ ಸ್ಟಾರ್ ಶಿವಣ್ಣನ ಜೊತೆಗೆ ಶ್ರದ್ಧಾ ಶ್ರೀನಾಥ್ ಹೆಜ್ಜೆ ಹಾಕುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಡಾನ್ಸ್ ನಂಬರ್ ಗೆ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯವಿದೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವನ್ನು ಮಾಡುತ್ತಿದ್ದು, ಆರು ದಿನಗಳ ಒಂದೇ ಶೆಡ್ಯೂಲ್ ನಲ್ಲಿ ಈ ಹಾಡಿನ ಚಿತ್ರೀಕರಣ ಮುಗಿಯಲಿದೆ.

ಚಿತ್ರವನ್ನು ಜಯಣ್ಣ ಭೋಗೇಂದ್ರ ನಿರ್ಮಿಸುತ್ತಿದ್ದು, ಈ ಹಾಡಿನ ಬಳಿಕ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ. ಈ ನಡುವೆ ಈ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ್ದು ಚಿತ್ರತಂಡದ ಖುಷಿ ಹೆಚ್ಚು ಮಾಡಿದೆ.

ಈ ಚಿತ್ರದಲ್ಲಿ ಹಲವು ವಿಶೇಷತೆಗಳಿದ್ದು, ಇದೇ ಮೊದಲ ಬಾರಿಗೆ ಹಿಂದಿಯ ವಿವೇಕ್ ಒಬೆರಾಯ್ ಕನ್ನಡದಲ್ಲಿ ಅಭಿನಯಿಸುತ್ತಿದ್ದಾರೆ. ಅವರಿಗೆ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ‘ಟಗರು’ ಖ್ಯಾತಿಯ ಛಾಯಾಗ್ರಾಹಕ ಮಹೇಂದ್ರ ಸಿಂಹ ಈ ಚಿತ್ರದ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮಯೂರಿ ಮತ್ತೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಮಹೇಂದ್ರನ್ ಮತ್ತು ಹರೀಶ್ ಉತ್ತಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top