RESPONSIVE LEADERBOARD AD AREA
Film News

ಮಾರ್ಚ್ 1 ರಿಂದ ‘ಯಜಮಾನ’ನ ಜಮಾನ…!!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ಯಜಮಾನ’ ಚಿತ್ರ, ಮಾರ್ಚ್ 1 ರಂದು ತೆರೆ ಕಾಣಲಿದೆ. ಇದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ನಿರ್ದೇಶಿಸಿರುವ ಈ ಚಿತ್ರ, ತನ್ನ ಸುಮಧುರ ಹಾಡುಗಳು, ಟೀಸರ್ ಮತ್ತು ಟ್ರೈಲರ್ ಗಳಿಂದ ಭಾರೀ ಸುದ್ದಿ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದ್ದು, ದಾಖಲೆ ಸೃಷ್ಟಿಸುತ್ತಿದೆ.

ಡಿ ಬಾಸ್ ಅಭಿನಯದ ‘ತಾರಕ್’ 2017ರ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಿತ್ತು. ಬಳಿಕ ಅವರ ಯಾವುದೇ ಚಿತ್ರಗಳು ಬಿಡುಗಡೆಯಾಗಿಲ್ಲ. ಇದೀಗ ಸುಮಾರು ಒಂದೂವರೆ ವರ್ಷದ ನಂತರ ‘ಯಜಮಾನ’ ಬಿಡುಗಡೆಯಾಗುತ್ತಿದ್ದು, ದರ್ಶನ್ ಅಭಿಮಾನಿಗಳು ಚಿತ್ರ ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

ಶೈಲಜಾ ನಾಗ್, ಬಿ ಸುರೇಶ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ನಟಿಸಿದ್ದಾರೆ. ಡಾಲಿ ಧನಂಜಯ್ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅನೂಪ್ ಟಾಕೂರ್ ಸಿಂಗ್ ಮತ್ತೊಬ್ಬ ವಿಲನ್ ಆಗಿ ಅಬ್ಬರಿಸಿದ್ದಾರೆ.

ವಿ ಹರಿಕೃಷ್ಣ ಸಂಗೀತ ನೀಡಿದ್ದು, ‌ಶ್ರೀಶ ಕುಡುವಳ್ಳಿ ಛಾಯಾಗ್ರಹಣ ಚಿತ್ರಕ್ಕೆ ಇದೆ.

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top